ಬೆಂಗಳೂರು: ಚಲಿಸುತ್ತಿದ್ದ ಕಾರಿನ ಸನ್ ರೂಫ್ ತೆರೆದು, ಎದ್ದು ನಿಂತು ಜೋಡಿಯೊಂದು ಅಸಭ್ಯ ವರ್ತನೆ ತೋರಿದ್ದ ಪ್ರಕರಣದಲ್ಲಿ ಕಾರಿನ ಮಾಲೀಕನಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.
ಕಾರಿನ ಮಾಲೀಕನನ್ನು ಪತ್ತೆ ಹಚ್ಚಿದ ಹಲಸೂರು ಸಂಚಾರ ಠಾಣಾ ಪೊಲೀಸರು, ₹1,500 ದಂಡ ವಿಧಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಗೊತ್ತಾಗಿದೆ.
ಮೇ 26ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿತ್ತು. ಕಾರಿನ ಸನ್ ರೂಫ್ ತೆರೆದು ನಿಂತಿದ್ದ ಜೋಡಿ ಅಸಭ್ಯವಾಗಿ ವರ್ತನೆ ತೋರಿದ್ದರು. ಹಿಂಬದಿ ವಾಹನ ಸವಾರರೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆ ಹಿಡಿದಿದ್ದರು. ಆ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.
ಸಂಚಾರ ನಿಯಮ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಿಕೊಂಡು, ದಂಡ ಹಾಕಲಾಗಿದೆ. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಚಾಲಕನಿಗೆ ಸೂಚನೆ ನೀಡಲಾಗಿದೆ ಎಂದು ಹಲಸೂರು ಸಂಚಾರ ಠಾಣಾ ಪೊಲೀಸರು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.