ADVERTISEMENT

ಬಾಡಿಗೆ ನೆಪದಲ್ಲಿ ಕಾರು ಕಳವು: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 19:37 IST
Last Updated 6 ಜುಲೈ 2018, 19:37 IST

ಬೆಂಗಳೂರು: ಬಾಡಿಗೆ ನೆಪದಲ್ಲಿ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಸಚಿನ್‌ ಎಂಬುವರನ್ನು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಯಾದ ಆರೋಪಿ, 2017ರಲ್ಲಿ ಕುಮಾರ ಟ್ರಾವೆಲ್ಸ್‌ನಲ್ಲಿ ಕಾರೊಂದನ್ನು ಬಾಡಿಗೆ ಪಡೆದಿದ್ದರು. ಅದನ್ನು ವಾಪಸ್‌ ಕೊಡದೆ ತಲೆಮರೆಸಿಕೊಂಡಿದ್ದರು. ಅವರ ವಿರುದ್ಧ ಟ್ರಾವೆಲ್ಸ್‌ ಮಾಲೀಕರು ದೂರು ನೀಡಿದ್ದರು.

‘ಆರೋಪಿಯು ಹಲವೆಡೆ ಕಾರು ಕಳವು ಮಾಡಿರುವುದು ಗೊತ್ತಾಗಿದೆ. ಆ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ’ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.