ADVERTISEMENT

ಬೆಂಗಳೂರು: ನಿರಾಶ್ರಿತ ಮಾನಸಿಕ ಅಸ್ವಸ್ಥರಿಗೆ ಆರೈಕೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 23:30 IST
Last Updated 18 ಡಿಸೆಂಬರ್ 2025, 23:30 IST
.
.   

ಬೆಂಗಳೂರು: ‘ನಿರಾಶ್ರಿತ ಮಾನಸಿಕ ಅಸ್ವಸ್ಥರಿಗೆ ಸಮಗ್ರ ಆರೈಕೆ ಸೇವೆಗಳನ್ನು ಒದಗಿಸುವ ದೃಷ್ಟಿಯಲ್ಲಿ ಚರ್ಚಾ ಸಭೆ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ನೇತೃತ್ವ ವಹಿಸಲಿದ್ದಾರೆ’ ಎಂದು ಆಲದಮರ ಫೌಂಡೇಷನ್ ಉಪ ನಿರ್ದೇಶಕ ಫರಾಝ್‌ ಸೈಯದ್ ಮುಹಮ್ಮದ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ.20ರಂದು ಬೆಳಿಗ್ಗೆ 10ಕ್ಕೆ ಆರೋಗ್ಯಸೌಧದಲ್ಲಿ ಚರ್ಚಾ ಸಭೆ ನಡೆಯಲಿದೆ. ಇದು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಕಾರ್ಯಕ್ರಮ’ ಎಂದು ಮಾಹಿತಿ ನೀಡಿದರು.

ಸಹಾಯಕ ನಿರ್ದೇಶಕಿ ಡಾ. ಮೃನಾಲಿನಿ, ‘ಮಾನಸಿಕ ಚಿಕಿತ್ಸೆಗೆ ಕುಟುಂಬ ಮತ್ತು ಸ್ನೇಹಿತರ ಸಹಕಾರ ದೊರಕದ ನಿರಾಶ್ರಿತರನ್ನು ಗುಣಪಡಿಸಿ, ಪುನರ್ವಸತಿ ಕಲ್ಪಿಸುವುದು ನಮ್ಮ ಗುರಿ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.