ADVERTISEMENT

ಜಾತಿ ನಿಂದನೆ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 10:44 IST
Last Updated 7 ಮಾರ್ಚ್ 2022, 10:44 IST
ವಕೀಲ ಜಗದೀಶ್ ಕೆ.ಎನ್. ಮಹದೇವ್ (ಚಿತ್ರ-ಫೇಸ್‌ಬುಕ್)
ವಕೀಲ ಜಗದೀಶ್ ಕೆ.ಎನ್. ಮಹದೇವ್ (ಚಿತ್ರ-ಫೇಸ್‌ಬುಕ್)   

ಬೆಂಗಳೂರು: ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಕೆ.ಎನ್‌. ಮಹಾದೇವ್ ಅವರಿಗೆ ನಗರದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯದಲ್ಲಿ ನಡೆದಿದ್ದ ಗಲಾಟೆ ವೇಳೆ ವಕೀಲರೊಬ್ಬರ ಕೊಲೆಗೆ ಯತ್ನಿಸಿದ್ದ ಆರೋಪದಡಿ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದರು. ಈ ‍ಪ್ರಕರಣದಲ್ಲಿ ಜಗದೀಶ್ ಅವರಿಗೆ ಇತ್ತೀಚೆಗಷ್ಟೇ ನ್ಯಾಯಾಲಯ ಜಾಮೀನು ನೀಡಿತ್ತು.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಜಗದೀಶ್‌ಗೆ ಕೊಲೆ ಯತ್ನ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಜಾತಿ ನಿಂದನೆ ಪ್ರಕರಣದಿಂದಾಗಿ ಹೊರಗೆ ಬಂದಿರಲಿಲ್ಲ. ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲೂ ಅವರಿಗೆ ಜಾಮೀನು ಸಿಕ್ಕಿದ್ದು, ಸದ್ಯದಲ್ಲೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.