ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಂಡಿದೆ. ಈ ಸಂದರ್ಭದಲ್ಲಿ ಹೂಗಾರರು ‘ಹಿಂದೂ ಹೂಗಾರ’ ಎಂದೇ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಹೂಗಾರ ಸೇವಾ ಮಹಾಸಭಾ ಮನವಿ ಮಾಡಿದೆ.
ಜೀರ, ಗುರವ, ಗುರುವ, ಪೂಜಾರ, ಪೂಜಾರಿ, ಫುಲಾರಿ, ಫೂಲಮಾಲಿ ಮುಂತಾದ ಉಪನಾಮಗಳನ್ನು ಹೊಂದಿರುವ ಹೂಗಾರ ಸಮುದಾಯದ ಎಲ್ಲರೂ ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಹೂಗಾರ ಎಂದು, ಕುಲಕಸುಬು ಕಾಲಂನಲ್ಲಿ ಹೂಗಾರಿಕೆ ಎಂದು ನಮೂದಿಸಬೇಕು ಎಂದು ಮಹಾಸಭಾ ಅಧ್ಯಕ್ಷ ಶಂಕರ್ ಹೂಗಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.