ಬೆಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಜಾತಿ ನಿಂದನೆ ಮಾಡಿದ್ದ ಹಾಗೂ ವೈಷಮ್ಯ ಮೂಡಿಸಿದ್ದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಶುಕ್ರವಾರ ರಾತ್ರಿ ಜಗದೀಶ್ ಅವರನ್ನು ಬಂಧಿಸಿದ್ದರು.
‘ಜಗದೀಶ್ ಅವರು ಜಾತಿ ನಿಂದನೆ ಮಾಡಿದ್ದಾರೆ’ ಎಂದು ಆರೋಪಿಸಿ ಕೆಂಚನಹಳ್ಳಿ ಮಂಜುನಾಥ್ ಅವರು ದೂರು ನೀಡಿದ್ದರು. ದೂರು ಆಧರಿಸಿ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳಾದ 196(1) ಹಾಗೂ 299ರ ಅಡಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಜಗದೀಶ್, ‘ಧರ್ಮಸ್ಥಳ ಹತ್ಯಾಕಾಂಡದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ನನ್ನ ಮೇಲೆ ಸುಳ್ಳು ದೂರು ದಾಖಲಿಸಿ, ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ದೇಶದ ಸಂವಿಧಾನ ಇನ್ನೂ ಬದುಕಿದೆ. ನ್ಯಾಯಕ್ಕೆ ಜಯ ಸಿಕ್ಕಿದ್ದು, ನನಗೆ ಜಾಮೀನು ಸಿಕ್ಕಿದೆ. ಸತ್ಯ, ನ್ಯಾಯದ ಪರ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯುತ್ತದೆ’ ಎಂದು ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.