ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬೆಂಗಳೂರು ಜಲಮಂಡಳಿಯು ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಸೆ.15ರಿಂದ ಮೂರು ದಿನ ನಗರದಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾ
ಗಾರಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ. ನೀರು ಪೂರೈಕೆಯಲ್ಲಿ ವ್ಯತ್ಯಯ ಆಗುವುದರಿಂದ ಮೊದಲೇ ಸಂಗ್ರಹ ಮಾಡಿಕೊಳ್ಳಬೇಕು ಎಂದು ಜಲಮಂಡಳಿ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕಾವೇರಿ 5ನೇ ಹಂತದ ಜಲರೇಚಕ ಯಂತ್ರಾಗಾರಗಳನ್ನು ಸೆ.15ರಂದು ಬೆಳಿಗ್ಗೆ 1ರಿಂದ ಸೆ.17ರ ಮಧ್ಯಾಹ್ನ 1ರವರೆಗೆ, ಕಾವೇರಿ ಹಂತ-1, ಹಂತ-2, ಹಂತ-3, ಹಂತ-4 ಹಾಗೂ 1ನೇ ಘಟ್ಟ ಮತ್ತು 2ನೇ ಘಟ್ಟಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.16ರ ಬೆಳಿಗ್ಗೆ 6ರಿಂದ ಸೆ.17ರ ಬೆಳಿಗ್ಗೆ 6ರವರೆಗೆ
ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.