ADVERTISEMENT

ಬೆಂಗಳೂರು | ಕಾವೇರಿ ನೀರು: ಇಂದಿನಿಂದ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:36 IST
Last Updated 15 ಸೆಪ್ಟೆಂಬರ್ 2025, 4:36 IST
ಇಂದು ನೀರು ಪೂರೈಕೆ ವ್ಯತ್ಯಯ
ಇಂದು ನೀರು ಪೂರೈಕೆ ವ್ಯತ್ಯಯ   

ಬೆಂಗಳೂರು: ಬೆಂಗಳೂರು ಜಲಮಂಡಳಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸೆ.15, 16 ಮತ್ತು 17ರಂದು ಕಾವೇರಿ ನೀರು ಪೂರೈಕೆ ಹಾಗೂ ಸಂಚಾರಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

ವಿವಿಧ ಹಂತಗಳ ಜಲರೇಚಕ ಯಂತ್ರಾಗಾರ ಸ್ಥಗಿತಗೊಳ್ಳುವುದರಿಂದ ಬೆಂಗಳೂರು ನಗರದಾದ್ಯಂತ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತುರ್ತು ಸಂದರ್ಭದಲ್ಲಿ ಮಾತ್ರ ಸಂಚಾರಿ ಕಾವೇರಿ ಯೋಜನೆಯ ಟ್ಯಾಂಕರ್‌ಗಳನ್ನು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ವಿ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಈ ವೇಳೆ ಟ್ಯಾಂಕರ್‌ ಸೇವೆಯೂ ಸಿಗದೇ ಇರುವುದರಿಂದ ಕಾವೇರಿ ನೀರು ಸರಬರಾಜಾಗುವ ಪ್ರದೇಶಗಳ ನಾಗರಿಕರು ಮುಂಜಾಗ್ರತೆಯಾಗಿ ನೀರಿನ ಸಂಗ್ರಹಣೆ ಸೇರಿದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.