
ಬೆಂಗಳೂರು: ನಗರದ ವಿವಿಧ ಬಡಾವಣೆಗಳಲ್ಲಿ ಫೆ.26ರ ಬೆಳಿಗ್ಗೆ 6ರಿಂದ ಫೆ. 27ರ ಬೆಳಿಗ್ಗೆ 6ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
ಮಂಡಳಿ ವತಿಯಿಂದ ಕಾವೇರಿ ಐದನೇ ಹಂತದ ಗೊಟ್ಟಿಗೆರೆ ಜಲಸಂಗ್ರಹಗಾರದ ಸಮೀಪ ಇಎಂಎಫ್ ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಣೆ ಮಾಡಿಕೊಳ್ಳಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಪ್ರದೇಶಗಳು: ವೈಟ್‌ಫೀಲ್ಡ್, ನೆಲ್ಲೂರಹಳ್ಳಿ, ಸಿದ್ಧಾಪುರ, ನಾಗೊಂಡನಹಳ್ಳಿ, ರಾಮಗೊಂಡನಹಳ್ಳಿ, ಚನ್ನಸಂದ್ರ, ಹೂಡಿ, ಗರುಡಾಚಾರ್ ಪಾಳ್ಯ, ದೊಡ್ಡನೆಕ್ಕುಂದಿ, ಮುನ್ನೇನಕೊಳಾಲು, ಕುಮಾರಸ್ವಾಮಿ ಬಡಾವಣೆ, ಪೂರ್ಣಪ್ರಜ್ಞ ಲೇಔಟ್, ಬನಶಂಕರಿ, ಕೊಲ್ಲಹಳ್ಳಿ, ಅಂಜನಾಪುರ, ಗೊಟ್ಟಿಗೆರೆ, ಬೇಗೂರು, ಕೋಡಿಚಿಕ್ಕನಹಳ್ಳಿ, ಕೂಡ್ಲು, ಕಾಡುಗೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.