ADVERTISEMENT

ಸದಾಶಿವನಗರದ ಸ್ಪಾ ಮೇಲೆ ಸಿಸಿಬಿ ದಾಳಿ; ಐವರು ಯುವತಿಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 3:46 IST
Last Updated 2 ಸೆಪ್ಟೆಂಬರ್ 2020, 3:46 IST

ಬೆಂಗಳೂರು: ಸದಾಶಿವನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ 'ಸಮ್ಮರ್ ಹಿಲ್ಸ್' ಸ್ಪಾ ಹಾಗೂ ಮಸಾಜ್ ಪಾರ್ಲರ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮಾಲೀಕ ಕೈವುನ್ ಶಾಂಗ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲವು ತಿಂಗಳಿನಿಂದ ಅಕ್ರಮವಾಗಿ ಸ್ಪಾ ನಡೆಸಲಾಗುತ್ತಿತ್ತು. ಈ ಬಗ್ಗೆ ಬರುತ್ತಿದ್ದಂತೆ ದಾಳಿ ಮಾಡಿದ ಪೊಲೀಸರು, ಸ್ಪಾದಲ್ಲಿದ್ದ ಐವರು ಯುವತಿಯರನ್ನು ರಕ್ಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT