ಬೆಂಗಳೂರು: ಹಿಮಾಚಲ ಪ್ರದೇಶದಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನುಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 8 ಲಕ್ಷ ಮೌಲ್ಯದ 280 ಗ್ರಾಂ ಚರಸ್ ಜಪ್ತಿ ಮಾಡಿದ್ದಾರೆ.
‘ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿ ಡ್ರಗ್ಸ್ ಮಾರುತ್ತಿದ್ದ. ಮಾಹಿತಿ ಸಿಗುತ್ತಿದ್ದಂತೆ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಆರೋಪಿಯಿಂದ ಮೊಬೈಲ್ ಹಾಗೂ ತೂಕದ ಯಂತ್ರವನ್ನೂ ಜಪ್ತಿ ಮಾಡಲಾಗಿದೆ. ಮತ್ತಷ್ಟು ಮಂದಿ ಡ್ರಗ್ಸ್ ಮಾರಾಟದಲ್ಲಿ ತೊಡಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.