ADVERTISEMENT

ಸಿಸಿಬಿ ಕಾರ್ಯಾಚರಣೆ: ಎಂಟು ಮಂದಿ ಬಂಧನ

ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದ ಆರೋಪ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2025, 0:14 IST
Last Updated 5 ಏಪ್ರಿಲ್ 2025, 0:14 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಉದ್ಯೋಗ ಅರಸಿ ನಗರಕ್ಕೆ ಬರುತ್ತಿದ್ದ ಹೆಣ್ಣುಮಕ್ಕಳಿಗೆ ಉದ್ಯೋಗದ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.

ADVERTISEMENT

ಮಧ್ಯವರ್ತಿಗಳಾದ ವಸೀಮ್, ಮನೋಹರ್, ಸೀನಾ, ಲೋಕೇಶ್‌ ಗೌಡ, ಲೋಕೇಶ್, ವಿಜಯ್, ಪ್ರಸಾದ್, ಸುರೇಶ್‌ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಮಂಡ್ಯ, ಮೈಸೂರು ಭಾಗದ ಇಬ್ಬರು ಯುವತಿಯರು ಹಾಗೂ ಪಂಜಾಬ್, ದೆಹಲಿ, ಕೋಲ್ಕತ್ತಾದ ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ.

ಆರೋಪಿಗಳು ನಾಗರಬಾವಿ, ಮಡಿವಾಳ, ಬೊಮ್ಮನಹಳ್ಳಿ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಬಾಲಕಿ ಮತ್ತು ಏಳು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ದೂರದ ಊರುಗಳಿಂದ ಉದ್ಯೋಗ ಅರಸಿ ನಗರಕ್ಕೆ ಬರುತ್ತಿದ್ದ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದ ಆರೋಪಿಗಳು, ಒಳ್ಳೆಯ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದರು. ಧಾರಾವಾಹಿಗಳಲ್ಲಿ ಅವಕಾಶ ಕೊಡಿಸುವುದಾಗಿ, ಮಾಡೆಲ್ ಮಾಡುವುದಾಗಿ, ತಾರಾ ಹೋಟೆಲ್‌ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದರು. ಬಳಿಕ ಡ್ಯಾನ್ಸ್ ಬಾರ್‌ ಹಾಗೂ ವೇಶ್ಯಾವಾಟಿಕೆಗೆ ದೂಡುತ್ತಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.