ADVERTISEMENT

ಬೆಂಗಳೂರು | ಸಿಸಿಬಿ ಕಾರ್ಯಾಚರಣೆ: ₹45 ಲಕ್ಷ ಮೌಲ್ಯದ ತಂಬಾಕು ಉತ್ಪನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2025, 15:32 IST
Last Updated 14 ಮಾರ್ಚ್ 2025, 15:32 IST
ಸಿಸಿಬಿ ಪೊಲೀಸರು ವಶ ಪಡಿಸಿಕೊಂಡ ತಂಬಾಕು ಉತ್ಪನ್ನ   
ಸಿಸಿಬಿ ಪೊಲೀಸರು ವಶ ಪಡಿಸಿಕೊಂಡ ತಂಬಾಕು ಉತ್ಪನ್ನ      

ಬೆಂಗಳೂರು: ನಗರದ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು, ₹45 ಲಕ್ಷ ಮೌಲ್ಯದ ತಂಬಾಕು ಉತ್ಪ‍ನ್ನಗಳು ಹಾಗೂ ₹10.50 ಲಕ್ಷ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗೋದಾಮಿನ ಮೇಲೆ ದಾಳಿ ನಡೆಸಿ, ದುಷ್ಪರಿಣಾಮಗಳ ಸೂಚನೆಗಳಿಲ್ಲದ ಹನ್ಸ್‌ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿ ದಿಲೀಪ್‌ನನ್ನು ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳು ಭಾಗಿಯಾಗಿದ್ದು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮ್‌ ರಾವ್‌ ಲೇಔಟ್‌ನ ಮೈದಾನದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಆರೋಪಿಯಿಂದ 55.20 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟಲ್‌ ಹಾಗೂ 1 ಕೆ.ಜಿ 905 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹10.50 ಲಕ್ಷವೆಂದು ಅಂದಾಜಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.