ADVERTISEMENT

ಉದ್ಯೋಗ ಆಮಿಷವೊಡ್ಡಿ ವೇಶ್ಯಾವಾಟಿಕೆ: 26 ಯುವತಿಯರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2023, 19:11 IST
Last Updated 10 ಜೂನ್ 2023, 19:11 IST
   

ಬೆಂಗಳೂರು: ನಗರದ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ 9 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲದ ಬಗ್ಗೆ ಮಾಹಿತಿ ಬಂದಿತ್ತು. ಮೂರು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ 9 ಆರೋಪಿಗಳನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ, ಪಶ್ಚಿಮ ಬಂಗಾಳ, ಮಧ್ಯಪ್ರದೇಶದ 26 ಯುವತಿಯರನ್ನು ರಕ್ಷಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಮಧ್ಯವರ್ತಿಗಳ ಮೂಲಕ ಹೊರ ರಾಜ್ಯಗಳಿಂದ ಯುವತಿಯರನ್ನು ನಗರಕ್ಕೆ ಕರೆಸಲಾಗಿತ್ತು. ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಯುವತಿಯರನ್ನು ಇರಿಸಲಾಗಿತ್ತು. ಮೊಬೈಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರಿಂದ ಹಣ ಪಡೆದು ಹೇಳಿದ ಸ್ಥಳಕ್ಕೆ ಯುವತಿಯರನ್ನು ಕಳುಹಿಸುತ್ತಿದ್ದರು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.