ಬೆಂಗಳೂರು: ಲಾಕ್‌ಡೌನ್ ನಡುವೆಯೇ ಹೋಟೆಲ್‌ನಲ್ಲಿ ಗುಂಪು ಸೇರಿ ಜೂಜಾಡುತ್ತಿದ್ದ ಆರೋಪದಡಿ 27 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 5.04 ಲಕ್ಷ ನಗದು ಜಪ್ತಿ ಮಾಡಿದ್ದಾರೆ.
‘ಹಳೇ ಮದ್ರಾಸ್ ರಸ್ತೆಯಲ್ಲಿರುವ ಪಾಮ್‌ಟ್ರಿ ಹೋಟೆಲ್ 5ನೇ ಮಹಡಿಯಲ್ಲಿ ಜೂಜು ಆಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಇನ್‌ಸ್ಪೆಕ್ಟರ್ ನೇತೃತ್ವದ ತಂಡ, ಹೋಟೆಲ್ ಮೇಲೆ ಬುಧವಾರ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದೆ. ಈ ಬಗ್ಗೆ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.