ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಲಗ್ಗೆರೆಯ 35 ವರ್ಷದ ಮಹಿಳೆ ಬಂಧಿತೆ. ಆಕೆ ಉದ್ಯೋಗದ ಆಮಿಷ ಒಡ್ಡಿ ನಾಲ್ವರು ಯುವತಿಯರನ್ನು ಮಾನವ ಕಳ್ಳ ಸಾಗಣೆ ಮಾಡಿಕೊಂಡಿದ್ದಳು. ರಾಜಾಜಿನಗರದ ಎರಡನೇ ಬ್ಲಾಕ್‌ನಲ್ಲಿರುವ ಕಟ್ಟಡವೊಂದರಲ್ಲಿ ಸಲೂನ್ ಮತ್ತು ಸ್ಪಾ ಹೆಸರಲ್ಲಿ ಮಸಾಜ್ ಪಾರ್ಲರ್ ನಡೆಸುತ್ತಿದ್ದ ಬಂಧಿತೆ, ಅಲ್ಲಿ ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುತ್ತಿದ್ದಳು ಎಂದು ಪೊಲೀಸರು ತಿಳಿಸಿದರು.
ಅನೈತಿಕ ಚಟುವಟಿಕೆ ನಡೆಸುತ್ತಿರುವ ಮಸಾಜ್ ಪಾರ್ಲರ್‌ಗಳು, ಜನರನ್ನು ಮರಳು ಮಾಡುವ ಜಾಹೀರಾತುಗಳನ್ನು ಪ್ರಕಟಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಆರೋಪಗಳು ಬಂದಿವೆ. ಅಂಥ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಎಸ್.ಸುರೇಶ್ ಕುಮಾರ್ ಅವರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮತ್ತು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಅವರಿಗೆ ಇತ್ತೀಚೆಗೆ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.