ಬೆಂಗಳೂರು: ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿರುವ ಎಕ್ಸ್‌ಕ್ಯೂಸ್ ಬಾರ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ಮಾಡಿದ್ದು, ಅರೆನಗ್ನ ನೃತ್ಯ ಮಾಡಲು ಬಳಸಿಕೊಳ್ಳುತ್ತಿದ್ದ 19 ಯುವತಿಯರನ್ನು ರಕ್ಷಿಸಿದ್ದಾರೆ.
‘ಬಾರ್‌ನಲ್ಲಿ ಅಕ್ರಮವಾಗಿ ನೃತ್ಯ
ಮಾಡಿಸುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಬಾರ್ ಮೇಲೆ ದಾಳಿ ಮಾಡಿ, ವ್ಯವಸ್ಥಾಪಕ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. 17 ಗ್ರಾಹಕರನ್ನೂ ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು. ‘ಮಾಲೀಕ, ವ್ಯವಸ್ಥಾಪಕ ಸೇರಿದಂತೆ ಹಲವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.