ADVERTISEMENT

ಪಿಯುಸಿ ಪ್ರಶ್ನೆಪತ್ರಿಕೆ ಇಡುವ ಖಜಾನೆಗೆ ಸಿಸಿಟಿವಿ ಕಣ್ಗಾವಲು: ಸುರೇಶ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2020, 18:47 IST
Last Updated 7 ಫೆಬ್ರುವರಿ 2020, 18:47 IST
ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್
ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್   
""

ಬೆಂಗಳೂರು:ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅಕ್ರಮ ತಡೆಯುವುದಕ್ಕಾಗಿ ಪ್ರಶ್ನೆಪತ್ರಿಕೆ ಸಂಗ್ರಹಿಸಿ ಇಡುವ ಎಲ್ಲ ಜಿಲ್ಲಾ ಕೇಂದ್ರಗಳ ಖಜಾನೆ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರಲಿದೆ.

‘ಈ ಮೊದಲು ಕೆಎಸ್‌ಇಇಬಿ ಮತ್ತು ಪಿಯು ಇಲಾಖೆಗಳ ಮುಖ್ಯ ಕಚೇರಿಗಳ ಸುತ್ತ ಸಿಸಿಟಿವಿ ಕಣ್ಗಾವಲು ಇಡಲಾಗುತ್ತಿತ್ತು. ಇನ್ನಷ್ಟು ಭದ್ರತೆ ನೀಡುವ ಸಲುವಾಗಿ ಪ್ರತಿ ಜಿಲ್ಲೆಯಲ್ಲಿ ಖಜಾನೆ ಇರುವ ಜಿಲ್ಲಾಧಿಕಾರಿಕಚೇರಿಯನ್ನುಕ್ಯಾಮೆರಾ ಕಣ್ಗಾವಲಿಗೆ ಒಳಪಡಿಸಲಾಗುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ತಿಳಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರೊಂದಿಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಶುಕ್ರವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ಪರೀಕ್ಷೆ ಅಕ್ರಮ ನಡೆಸುವಲ್ಲಿ ನಿಸ್ಸೀಮರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ಟ್ಯೂಷನ್‌ ಕೇಂದ್ರಗಳು ಹಾಗೂಪರೀಕ್ಷಾ ಕೇಂದ್ರಗಳ ಸಮೀಪ ಇರುವ ಜೆರಾಕ್ಸ್, ಸೈಬರ್‌ ಸೆಂಟರ್‌ಗಳ ಮೇಲೆ ನಿಗಾ ಇಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವದಂತಿ ಹಬ್ಬಿಸುವವರ ಬಗ್ಗೆ ವಿಶೇಷ ನಿಗಾ ವಹಿಸಲಾಗುತ್ತದೆ. ಇಂತಹ ಕೃತ್ಯದಲ್ಲಿ ವಿದ್ಯಾರ್ಥಿಗಳು ಶಾಮೀಲಾದರೆ ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಇರುವ ಕಾನೂನುಕ್ರಮವನ್ನು ಅವರ ವಿರುದ್ಧವೂ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.

ADVERTISEMENT

ಮಾ 4ರಿಂದ ದ್ವಿತೀಯ ಪಿಯು ಪರೀಕ್ಷೆ

2020–21ರ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮಾರ್ಚ್‌ 4ರಿಂದ 23ರವರೆಗೆ ನಡೆಯಲಿದೆ.

ವೇಳಾಪಟ್ಟಿಯುhttp://pue.kar.nic.in/pue/PDF_files/exam/2019/2nd_exam_tt_041119.pdfಲಿಂಕ್‌ನಲ್ಲಿ ಲಭ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.