ಬೆಂಗಳೂರು: ತ್ಯಾಗ ಹಾಗೂ ಬಲಿದಾನದ ಸಂಕೇತವಾದ ಬಕ್ರೀದ್ ಅನ್ನು ಮುಸ್ಲಿಂ ಸಮುದಾಯದವರು ನಗರದಲ್ಲಿ ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಿದರು.
ನಗರದ ಹಲವು ಮಸೀದಿಗಳಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಧರ್ಮಗುರುಗಳು ಸಂದೇಶ ನೀಡಿದರು.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಅವರ ಪುತ್ರ, ನಟ ಜೈದ್ ಖಾನ್ ಪಾಲ್ಗೊಂಡಿದ್ದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಡಾ ಮಕಾನ್ ಈದ್ಗಾ ಮೈದಾನದಲ್ಲಿ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರ ಜೊತೆ ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಅವರು ಪ್ರಾರ್ಥನೆ ಸಲ್ಲಿಸಿದರು.
ಪಾದರಾಯನಪುರ, ಕಲಾಸಿಪಾಳ್ಯ, ಮೈಸೂರು ರಸ್ತೆ, ಶಿವಾಜಿನಗರ, ಹೆಬ್ಬಾಳ, ಆರ್.ಟಿ.ನಗರ, ಶಾಂತಿನಗರ, ಲಾಲ್‌ಬಾಗ್ ರಸ್ತೆ, ಮಾಗಡಿ ರಸ್ತೆ, ಕಮ್ಮಗೊಂಡನಹಳ್ಳಿ ವಿವಿಧ ಪ್ರಮುಖ ಮಸೀದಿಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು.
ಮಕ್ಕಳು, ದೊಡ್ಡವರು ಹೊಸ ಬಟ್ಟೆ ಧರಿಸಿ, ಹೊಸ ಟೋಪಿ ತೊಟ್ಟು ಸಂಭ್ರಮಿಸಿದರು. ಪರಸ್ಪರ ಆಲಂಗಿಸಿ ಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಮಕ್ಕಳು ಶುಭಾಶಯ ವಿನಿಯಮ ಮಾಡಿಕೊಂಡರು. ನೆರೆ ಹೊರೆಯವರು, ಬಡವರಿಗೆ ತಮ್ಮ ಶಕ್ತಿಗೆ ಅನುಸಾರವಾಗಿ ಮಾಂಸ ದಾನ ಮಾಡಿದರು. ಹಬ್ಬದೂಟ ಮಾಡಿ ಸಂಬಂಧಿಕರ ಜೊತೆಗೆ, ಸ್ನೇಹಿತರ ಜೊತೆಗೆ ಹಂಚಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.