ADVERTISEMENT

ಬೆಂಗಳೂರು: ಕಲಾಪ ಮಾರ್ಗಸೂಚಿ ಮಾರ್ಪಾಡು

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 10:34 IST
Last Updated 14 ಜೂನ್ 2020, 10:34 IST
ರಾಯಚೂರಿನ ಅಶೋಕ ಗಸ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಶನಿವಾರ ಜಿಲ್ಲಾ ಸವಿತಾ ಸಮಾಜದ ಮುಖಂಡರು ವಿಜಯೋತ್ಸವ ಆಚರಿಸಿದರು
ರಾಯಚೂರಿನ ಅಶೋಕ ಗಸ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಶನಿವಾರ ಜಿಲ್ಲಾ ಸವಿತಾ ಸಮಾಜದ ಮುಖಂಡರು ವಿಜಯೋತ್ಸವ ಆಚರಿಸಿದರು   

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ನಿಗದಿಪಡಿಸಿರುವ ಮಾರ್ಗಸೂಚಿಯನ್ನು ಇದೇ 15ರಿಂದ ಜಾರಿಗೆ ಬರುವಂತೆ ಮಾರ್ಪಾಡು ಮಾಡಲಾಗಿದೆ.

ಜೂನ್ 15ರಿಂದ ಎರಡು ವಾರಗಳ ಅವಧಿಗೆ ಮಾತ್ರ ಒಂದು ಕೋರ್ಟ್‌ನಲ್ಲಿ ದಿನಕ್ಕೆ ಬೆಳಗಿನ ಅವಧಿಯಲ್ಲಿ 10 ಮತ್ತು ಮಧ್ಯಾಹ್ನದ ಅವಧಿಯಲ್ಲಿ 10 ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸಲಾಗುವುದು.

ವಕೀಲರು ವಾದ ಮಂಡನೆಗೆ ಇಚ್ಛಿಸಿದರೆ ವಿಡಿಯೊ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಲಾಗುವುದು. ಕೋರ್ಟ್ ಆವರಣಕ್ಕೆ ವಾದ ಮಂಡಿಸಲಿರುವ ವಕೀಲರನ್ನು ಹೊರತುಪಡಿಸಿ, ಇತರರಿಗೆ ಪ್ರವೇಶವಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಎರಡು ವಾರಗಳ ಪರಿಸ್ಥಿತಿ ಅವಲೋಕಿಸಿ ಮಾರ್ಗಸೂಚಿ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೈಕೋರ್ಟ್‌ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.