ADVERTISEMENT

ಕೇಂದ್ರ ವಿ.ವಿ: ಅಧಿಸೂಚನೆ ಹಿಂದಕ್ಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 19:42 IST
Last Updated 13 ಫೆಬ್ರುವರಿ 2020, 19:42 IST

ಬೆಂಗಳೂರು: ವಿವಿಧ ರೀತಿಯ ಕಾಲೇಜು ಸಂಯೋಜನೆಯ ಕುರಿತಂತೆ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಸರ್ಕಾರದ ಸೂಚನೆಯಂತೆ ಹಿಂದಕ್ಕೆ ಪಡೆಯಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

ಕಾಲೇಜು ಸಂಯೋಜನೆಯಲ್ಲಿ ಸ್ಥಳೀಯ ವಿಚಾರಣಾ ಸಮಿತಿಗಳನ್ನು ಸದೃಢಗೊಳಿಸುವ ಉದ್ದೇಶದಿಂದ ಎಲ್ಲ ವಿಶ್ವವಿದ್ಯಾಲಯಗಳಿಗೆ ಅನ್ವಯವಾಗುವಂತೆ ಏಕರೂಪದ ನಮೂನೆ ಸಿದ್ಧಪಡಿಸಲಿದೆ. ಹೀಗಾಗಿ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಸಂಯೋಜನಾ ಪ್ರಕ್ರಿಯೆಗಳನ್ನು ಮುಂದುವರಿಸಬಾರದು ಎಂದು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಪತ್ರ ಬರೆದು ಸೂಚಿಸಿರುವ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT