ADVERTISEMENT

ವಲಸೆ ಕಾರ್ಮಿಕರಿಗೆ ಕೇಂದ್ರದಿಂದ ಆಹಾರಧಾನ್ಯ: ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 19 ಮೇ 2020, 1:42 IST
Last Updated 19 ಮೇ 2020, 1:42 IST
ಕೆ.ಗೋಪಾಲಯ್ಯ
ಕೆ.ಗೋಪಾಲಯ್ಯ   

ಬೆಂಗಳೂರು: ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಪ್ಯಾಕೇಜ್ -2’ ಅಡಿ ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಆಹಾರ ಸಚಿವ ಕೆ. ಗೋಪಾಲಯ್ಯ, ‘ಮೇ ತಿಂಗಳಲ್ಲಿ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಇದೇ 26 ರಿಂದ 31 ರವರೆಗೆ ನೀಡಲಾಗುವುದು. ಜೂನ್ ತಿಂಗಳಲ್ಲಿಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಜೂನ್‌ 1ರಿಂದ 10ರವರೆಗೆ ವಿತರಿಸಲಾಗುವುದು’ ಎಂದರು.

‘ಈ ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ವಹಿಸಿಕೊಂಡಿದೆ. ರಾಜ್ಯದಲ್ಲಿರುವ ವಲಸೆ ಕಾರ್ಮಿಕರಿಗೆ ವಿತರಿಸಲು 40,193 ಟನ್ ಅಕ್ಕಿ ಮತ್ತು 2,544 ಟನ್ ಕಡಲೆಕಾಳು ಅವಶ್ಯವೆಂದು ಅಂದಾಜಿಸಲಾಗಿದೆ. ಕಡಿಮೆಯಾದರೆ ಇನ್ನಷ್ಟು ಕಳುಹಿಸಿಕೊಡುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ’ ಎಂದು ಗೋಪಾಲಯ್ಯ ಹೇಳಿದರು.

ADVERTISEMENT

‘ವಲಸೆ ಕಾರ್ಮಿಕರನ್ನು ರಾಜ್ಯ ಸರ್ಕಾರವೇ ಗುರುತಿಸಬೇಕಾಗಿದೆ. ಕರ್ನಾಟಕದಲ್ಲಿ 40.19 ಲಕ್ಷ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಈ ಯೋಜನೆಯ ಲಾಭ ಪಡೆಯಲಿದ್ದಾರೆ’ ಎಂದೂ ವಿವರಿಸಿದರು.

ಅರ್ಹತೆಯ ಮಾನದಂಡ

* ವಲಸೆ ಕಾರ್ಮಿಕರು ಹೊರ ಜಿಲ್ಲೆ ಅಥವಾ ಹೊರ ರಾಜ್ಯದವರಾಗಿರಬೇಕು

* ಯಾವುದೇ ಕಾರ್ಡ್‌ (ಅಂತ್ಯೋದಯ, ಬಿಪಿಎಲ್, ಎಪಿಎಲ್‌) ಹೊಂದಿರಬಾರದು

* ಸ್ವಂತ ಮನೆ ಹೊಂದಿರಬಾರದು, ಆದಾಯ ತೆರಿಗೆ ಪಾವತಿದಾರರಾಗಿರಬಾರದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.