ADVERTISEMENT

ಸಾಮಾನ್ಯ ಪ್ರವೇಶ ಪರೀಕ್ಷೆ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 20:47 IST
Last Updated 27 ಆಗಸ್ಟ್ 2021, 20:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಶನಿವಾರದಿಂದ ಆರಂಭವಾಗಲಿದ್ದು, 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಂಗಳೂರಿನ 86 ಕೇಂದ್ರಗಳು ಸೇರಿದಂತೆ ರಾಜ್ಯದ 530 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ನಡೆಯಲಿದೆ. ಕೋವಿಡ್‌ ಕಾರಣ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್‌ ದೃಢಪಟ್ಟಿರುವ 12 ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

28ರಂದು ಜೀವವಿಜ್ಞಾನ ಮತ್ತು ಗಣಿತ, 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ‌‌ ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರದಲ್ಲಿ ಇದೇ 30ರಂದು ಕನ್ನಡ ಪರೀಕ್ಷೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.