ADVERTISEMENT

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಅಪಹರಣ

​ಪ್ರಜಾವಾಣಿ ವಾರ್ತೆ
Published 4 ಮೇ 2025, 15:38 IST
Last Updated 4 ಮೇ 2025, 15:38 IST
   

ಬೆಂಗಳೂರು: ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯ ಕೊರಳಿನಿಂದ 45 ಗ್ರಾಂ. ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಎಚ್‌ಆರ್‌ಬಿಆರ್‌ ಲೇಔಟ್‌ನ ಒಂದನೇ ಬ್ಲಾಕ್ ನಿವಾಸಿ ರಶ್ಮಿತಾ ಅವರು ರಾತ್ರಿ 9 ಗಂಟೆ ಸಮಯದಲ್ಲಿ ಅಂಗಡಿಯಿಂದ ವಸ್ತುಗಳನ್ನು ಖರೀದಿಸಿ, ಉಪ ನೋಂದಣಾಧಿಕಾರಿ ಕಚೇರಿ ಮುಂಭಾಗ ನಡೆದು ಹೋಗುತ್ತಿದ್ದರು.

ಎದುರು ದಿಕ್ಕಿನಿಂದ ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರ ಪೈಕಿ ಹಿಂಬದಿ ಕುಳಿತಿದ್ದ ವ್ಯಕ್ತಿ, ಅವರ ಕೊರಳಿಗೆ ಕೈ ಹಾಕಿ ಸರ ಕಿತ್ತುಕೊಂಡಿದ್ದಾನೆ. ಬಳಿಕ ಇಬ್ಬರು ಪರಾರಿಯಾಗಿದ್ದಾರೆ. ತಕ್ಷಣ ರಶ್ಮಿತಾ ಅವರು ಕೂಗಿಕೊಂಡರೂ ಯಾರೂ ಸಹಾಯಕ್ಕೆ ಬರಲಿಲ್ಲ.

ADVERTISEMENT

ಘಟನೆ ಸಂಬಂಧ ಗೃಹಿಣಿಯ ದೂರು ಆಧರಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.