ADVERTISEMENT

ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಸರಗಳ್ಳತನ: ಇಬ್ಬರ ಸೆರೆ, 66 ಗ್ರಾಂ ಚಿನ್ನ ವಶ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 23:58 IST
Last Updated 9 ಫೆಬ್ರುವರಿ 2026, 23:58 IST
<div class="paragraphs"><p>ಬಂಧನ</p></div>

ಬಂಧನ

   

ಬೆಂಗಳೂರು: ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಬಂದು ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೆ.ಪಿ. ನಗರದ ಅರುಣ್‌ ಮತ್ತು ಆಂಧ್ರಪ್ರದೇಶದ ವೆಂಕಟ್‌ ಬಂಧಿತರು. ಆರೋಪಿಗಳಿಂದ ₹9.24 ಲಕ್ಷ ಮೌಲ್ಯದ 66 ಗ್ರಾಂ ಚಿನ್ನಾಭರಣ, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ವಿಲಾಸಿ ಜೀವನ ನಡೆಸುತ್ತಿದ್ದ ಆರೋಪಿಗಳು ನಗರದೆಲ್ಲೆಡೆ ಸುತ್ತಾಡಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜನವರಿ 27ರಂದು ಸಂಜೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು, ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಮೊಮ್ಮಗಳನ್ನು ಎತ್ತಿಕೊಂಡು ನಿಂತಿದ್ದ ಮಹಿಳೆಯನ್ನು ಮಾತನಾಡಿಸಿದ್ದಾರೆ. ಆಕೆಯ ಗಮನವನ್ನು ಬೇರೆಡೆ ಸೆಳೆದು 58.43 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಹೆಬ್ಬಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನದಿಂದ ಹೆಬ್ಬಾಳ ಠಾಣೆ, ಆರ್‌ಎಂಸಿ ಯಾರ್ಡ್‌ ಠಾಣೆಯ ತಲಾ ಒಂದು ಸರ ಅಪಹರಣ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.