ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸ್ನೇಹಿತೆಯನ್ನು ಭೇಟಿಯಾಗಲು ಮಹಿಳೆಯೊಬ್ಬರು ರಸ್ತೆ ಬದಿ ನಿಂತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀನಗರ ನಿವಾಸಿ ರೇಖಾ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ರೇಖಾ ಅವರು ತಮ್ಮ ಸ್ನೇಹಿತೆಯನ್ನು ಭೇಟಿಯಾಗಲು ಶನಿವಾರ ರಾತ್ರಿ 8.30ಕ್ಕೆ ನಾಗರಬಾವಿ ವೃತ್ತಕ್ಕೆ ಬಂದಿದ್ದರು. ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು, ಅವರ ಕುತ್ತಿಗೆಗೆ ಕೈ ಹಾಕಿ 10 ಗ್ರಾಂ. ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.
ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.