ADVERTISEMENT

ಚಿನ್ನದ ಸರಕಳವು; ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2021, 16:39 IST
Last Updated 26 ಆಗಸ್ಟ್ 2021, 16:39 IST
   

ಬೆಂಗಳೂರು: ಚಾಮರಾಜಪೇಟೆಯಲ್ಲಿ ಚಿನ್ನದ ಸರ ಕಳವು ಮಾಡುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿರುವ ಆರೋಪಿ ಇಮ್ರಾನ್‌ ಖಾನ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇದೀಗ ಆತನ ಸಹಚರ ನಬೀರ್‌ ಪಾಷಾನನ್ನೂ ಬಂಧಿಸಿದ್ದಾರೆ.

‘ಚಿನ್ನದ ಸರ ಕಳವು ಮಾಡಲು ಯತ್ನಿಸಿದ್ದ ಆರೋಪಿ ಇಮ್ರಾನ್‌ ಖಾನ್‌ ಎಂಬಾತನನ್ನೂ ಇತ್ತೀಚೆಗಷ್ಟೇ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಆತನ ಸಹಚರ ನಬೀರ್‌ ಪಾಷಾನನ್ನು ಬಂಧಿಸಲಾಗಿದ್ದು, ₹ 1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ವಿಜಯನಗರ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಚಿನ್ನದ ಸರ ಕದ್ದುಕೊಂಡು ಪರಾರಿಯಾಗಿದ್ದರು. ಅದೇ ಆರೋಪಿಗಳು ಬೈಕ್‌ನಲ್ಲಿ ಚಾಮರಾಜಪೇಟೆಗೆ ಬಂದು ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಲು ಯತ್ನಿಸಿದ್ದರು. ಮಹಿಳೆ ರಕ್ಷಣೆಗಾಗಿ ಕೂಗುತ್ತಿದ್ದಂತೆ ಸಹಾಯಕ್ಕೆ ಬಂದ ಸಾರ್ವಜನಿಕರು, ಆರೋಪಿಗಳನ್ನು ಬೆನ್ನಟ್ಟಿ ಹಿಡಿದಿದ್ದರು. ಇಮ್ರಾನ್‌ ಖಾನ್ ಮಾತ್ರ ಸಿಕ್ಕಿಬಿದ್ದಿದ್ದ. ನಬೀರ್ ಪಾಷಾ ತಪ್ಪಿಸಿಕೊಂಡಿದ್ದ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.