ADVERTISEMENT

ಶಶಿಕಲಾ ಜೊಲ್ಲೆಗೆ ‘ಜೀರೊ ಟ್ರಾಫಿಕ್‌’ ಪ್ರಶ್ನಿಸಿದ್ದ ಪಿಐಎಲ್ ವಜಾ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2021, 3:39 IST
Last Updated 8 ಡಿಸೆಂಬರ್ 2021, 3:39 IST
   

ಬೆಂಗಳೂರು: ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ‘ಜೀರೊ ಟ್ರಾಫಿಕ್’ ವ್ಯವಸ್ಥೆ ಕಲ್ಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಂತೆ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಯಾವುದೇ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಅಥವಾ ಆಡಳಿತಾತ್ಮಕ ಅಧಿಕಾರ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಾಕ್ಷ್ಯಾಧಾರ ಒದಗಿಸಿಲ್ಲ. ಹೀಗಾಗಿ ಅರ್ಜಿದಾರರ ಮನವಿಯನ್ನು ಸಕ್ಷಮ ಪ್ರಾಧಿಕಾರ ತಿರಸ್ಕರಿಸಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.