ADVERTISEMENT

ಚಾಮರಾಜನಗರ: ಪಿಎಫ್ ಐ ಜಿಲ್ಲಾ ಅಧ್ಯಕ್ಷ, ಕಾರ್ಯದರ್ಶಿ ಬಂಧನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 4:09 IST
Last Updated 27 ಸೆಪ್ಟೆಂಬರ್ 2022, 4:09 IST
   

ಚಾಮರಾಜನಗರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ ಐ) ಜಿಲ್ಲಾ ಅಧ್ಯಕ್ಷ ಕಫೀಲ್ ಅಹಮದ್ ಹಾಗೂ ಜಿಲ್ಲಾ ಕಾರ್ಯದರ್ಶಿ ಸುಹೇಬ್ ಖಾನ್ ಅವರನ್ನು ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.

'ಮುಂಜಾಗ್ರತಾ ಕ್ರಮವಾಗಿ ಇಬ್ಬರನ್ನೂ ಬಂಧಿಸಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ 'ಪ್ರಜಾವಾಣಿ'ಗೆ ತಿಳಿಸಿದರು.

ಎರಡು ತಂಡಗಳಾಗಿ ಕಾರ್ಯಾಚರಣೆ‌ ನಡೆಸಿದ ಪೊಲೀಸರು ಬೆಳಿಗ್ಗೆ 4.30ರ ಸುಮಾರಿಗೆ ಇಬ್ಬರನ್ನು ವಶಕ್ಕೆ ಪಡೆದು, ನಂತರ ತಹಶೀಲ್ದಾರರ ಮುಂದೆ ಹಾಜರು ಪಡಿಸಿದರು.

ADVERTISEMENT

ಇಬ್ಬರನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಶಿವಕುಮಾರ್ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.