ADVERTISEMENT

ಬೈಕ್‌ ಕಳ್ಳರ ಬಂಧನ: ₹2.5 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 21:38 IST
Last Updated 17 ನವೆಂಬರ್ 2021, 21:38 IST
ಆರೋ‍ಪಿಗಳಿಂದ ಜಪ್ತಿ ಮಾಡಿರುವ ದ್ವಿಚಕ್ರ ವಾಹನಗಳು 
ಆರೋ‍ಪಿಗಳಿಂದ ಜಪ್ತಿ ಮಾಡಿರುವ ದ್ವಿಚಕ್ರ ವಾಹನಗಳು    

ಬೆಂಗಳೂರು: ಮನೆಯ ಎದುರು ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳನ್ನು ಯಾರೂ ಇಲ್ಲದ ಸಮಯದಲ್ಲಿ ನಕಲಿ ಕೀ ಬಳಸಿ ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಿಯಾಜ್‌ ಪಾಷಾ ಮತ್ತು ಸಲ್ಮಾನ್‌ ಬಂಧಿತರು. ಇವರಿಂದ ₹2.5 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

‘ಸಿಬ್ಬಂದಿಯು ಮಂಗಳವಾರ ಮಧ್ಯಾಹ್ನಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಅವರನ್ನು ಕಂಡೊಡನೆಯೇ ಕಪ್ಪು ಬಣ್ಣದ ಪಲ್ಸರ್‌ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದ್ದರು. ಅನುಮಾನಗೊಂಡ ಸಿಬ್ಬಂದಿ ಅವರನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಬೈಕ್‌ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.