ADVERTISEMENT

ಈದ್ಗಾ ಮೈದಾನ ಹೋರಾಟ: ಚಾಮರಾಜಪೇಟೆಯಲ್ಲಿ ಬಂದ್‌; ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 5:58 IST
Last Updated 12 ಜುಲೈ 2022, 5:58 IST
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನ
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನ   

ಬೆಂಗಳೂರು: ಈದ್ಗಾ ಮೈದಾನವನ್ನು ಆಟದ ಮೈದಾನವನ್ನಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಜುಲೈ 12ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ‘ಚಾಮರಾಜಪೇಟೆ ಬಂದ್‌’ ನಡೆಸಲಿದೆ.

‘ಈದ್ಗಾ ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್‌ ಅವರ ಹೆಸರಿಡಬೇಕು. ಮೈದಾನ ಬಿಬಿಎಂಪಿ ಸ್ವತ್ತಾಗಿ ಉಳಿಯಬೇಕು. ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅವಕಾಶ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಾದ್ಯಂತ ಹೋಟೆಲ್‌, ಗಾರ್ಮೆಂಟ್ಸ್‌ ಹಾಗೂ ಶಾಲೆಗಳ ಆಡಳಿತ ಮಂಡಳಿಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಚಟುವಟಿಕೆಗಳನ್ನು ಬಂದ್‌ ಮಾಡಲಿದ್ದಾರೆ’ ಎಂದು ವೇದಿಕೆ ಅಧ್ಯಕ್ಷ ರಾಮೇಗೌಡ ತಿಳಿಸಿದರು.

ಡಿಸಿಪಿ, ನಾಲ್ವರು ಎಸಿಪಿ ನೇತೃತ್ವದಲ್ಲಿ ಭದ್ರತೆ: ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.