ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.