ಬೆಂಗಳೂರು: ಹವಾಮಾನ ಬದಲಾವಣೆಯಿಂದ ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಚಂಡಮಾರುತ, ಕಾಳ್ಗಿಚ್ಚು, ಬರಗಾಲ, ಪ್ರವಾಹ, ಸೇರಿ ನೈಸರ್ಗಿಕ ವಿಕೋಪಗಳು ಸಂಭವಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಷಯ ತಜ್ಞರು, ಪರಿಹಾರೋಪಾಯದ ಬಗ್ಗೆ ಸಮಾಲೋಚನೆ ನಡೆಸಿದರು.
ಚಾಣಕ್ಯ ವಿಶ್ವವಿದ್ಯಾಲಯವು ಹವಾಮಾನ ಬದಲಾವಣೆ ಕುರಿತು ನಗರದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ವಿಚಾರಸಂಕಿರಣದಲ್ಲಿ ನೀತಿ ನಿರೂಪಕರು, ವಿಜ್ಞಾನಿಗಳು, ಪರಿಸರವಾದಿಗಳು, ಎಂಜಿನಿಯರ್‌ಗಳು, ಶಿಕ್ಷಣ ತಜ್ಞರು ಪಾಲ್ಗೊಂಡಿದ್ದರು.
ರಷ್ಯನ್ ಅಕಾಡೆಮಿ ಆಫ್ ಸೈನ್ಸ್‌ನ ನಿಕೊಲಾಯ್ ಫಿಲಾಟೋವ್, ಕೆನಡಾದ ರಾಷ್ಟ್ರೀಯ ಜಲ ಶಂಶೋಧನಾ ಸಂಸ್ಥೆಯ ರಾಜಶೇಖರ ಮೂರ್ತಿ, ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಟಿ.ವಿ. ರಾಮಚಂದ್ರ, ಸೆಂಟರ್ ಫಾರ್ ಅನಲಿಟಿಕಲ್ ರಿಸರ್ಚ್ ಸ್ಟಡೀಸ್ ಸಂಸ್ಥೆಯ ದೀಪಕ್ ಬೊರ್ನಾರೆ ಸೇರಿದಂತೆ ಪಾಲ್ಗೊಂಡಿದ್ದ ವಿಷಯ ತಜ್ಞರು ‘ಈಗಲೇ ಎಚ್ಚೆತ್ತುಕೊಂಡು, ತುರ್ತು ಕ್ರಮಗಳನ್ನು ಕೈಗೊಳ್ಳಬೇಕು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಕೃಷಿ ಸೇರಿ ವಿವಿಧ ಕ್ಷೇತ್ರಗಳ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆಯೂ ಚರ್ಚಿಸಲಾಯಿತು. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನದ ನೆರವಿನಿಂದ ಪರಿಹಾರ ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜತೆಗೂ ಸಮಾಲೋಚನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.