ADVERTISEMENT

ಪೊಲೀಸರಿಗೆ ದೂರು ಕೊಟ್ಟ ಕುಲಪತಿ ಡಾ. ಜಯಕರ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 21:22 IST
Last Updated 20 ಜೂನ್ 2021, 21:22 IST
ಚನ್ನಪಟ್ಟಣದಲ್ಲಿ ನಡೆದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪತ್ನಿ ಶೀಲಾ ಅವರೊಂದಿಗೆ ಸಚಿವ ಸಿ.ಪಿ. ಯೋಗೇಶ್ವರ್
ಚನ್ನಪಟ್ಟಣದಲ್ಲಿ ನಡೆದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪತ್ನಿ ಶೀಲಾ ಅವರೊಂದಿಗೆ ಸಚಿವ ಸಿ.ಪಿ. ಯೋಗೇಶ್ವರ್   

ಬೆಂಗಳೂರು: ‘ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ‍ಪ್ರಭಾರ ಕುಲಪತಿ ಡಾ. ಜಯಕರ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಪರಿಚಿತರ ವಿರುದ್ಧ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಜಯಕರ್ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅವರ ವಿರುದ್ಧ ಸಿಬಿಐ ಕಚೇರಿಯಲ್ಲಿ ದೂರು ದಾಖಲಾಗಿದೆ. ಸರ್ಕಾರವು ನಿಯಮಬಾಹಿರವಾಗಿ ಅವರನ್ನು ಪ್ರಭಾರ ಕುಲಪತಿ ಹುದ್ದೆಗೆ ನೇಮಕ ಮಾಡಿದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರುಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.