ADVERTISEMENT

ಚಂದ್ರಯಾನ–3: ವಿಜ್ಞಾನಿಗಳನ್ನು ಅಭಿನಂದಿಸಿ, ದೆಹಲಿಗೆ ಮರಳಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಆಗಸ್ಟ್ 2023, 4:51 IST
Last Updated 26 ಆಗಸ್ಟ್ 2023, 4:51 IST

ಪ್ರಧಾನಿ ಮೋದಿ
ಪ್ರಧಾನಿ ಮೋದಿ   

ಬೆಂಗಳೂರು: ಚಂದ್ರಯಾನ-3ರ ಯಶಸ್ವಿಯಾಗಿದ್ದಕ್ಕೆ ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಳಿಕ ದೆಹಲಿಗೆ ತೆರಳಿದರು. 

ಪೀಣ್ಯದಲ್ಲಿರುವ ಇಸ್ರೊ ಕಮಾಂಡಿಂಗ್‌ ಸೆಂಟರ್‌ನಲ್ಲಿ ಚಂದ್ರಯಾನ-3ರ ಯಶಸ್ಸಿಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ಇಸ್ರೊ ಅಧ್ಯಕ್ಷ ಎಸ್‌. ಸೋಮನಾಥ್‌ ಅವರು ಪ್ರಧಾನಿಯವರಿಗೆ ಚಂದ್ರಯಾನ-3ರ ಪ್ರತಿಕೃತಿಯನ್ನು ನೀಡಿ ಗೌರವಿಸಿದರು. ಸೋಮನಾಥ್‌ ಸೇರಿದಂತೆ ಚಂದ್ರಯಾನ-3ರ ನೇತೃತ್ವ ವಹಿಸಿದ್ದ ವಿಜ್ಞಾನಿಗಳನ್ನು ಬೆನ್ನುತಟ್ಟಿ ಪ್ರಧಾನಿ ಅಭಿನಂದಿಸಿದರು.

ಇಲ್ಲಿಂದ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. 

ಬ್ರಿಕ್ಸ್ ಶೃಂಗಸಭೆ ಮುಗಿಸಿಕೊಂಡು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದರು.

ಮೋದಿ ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆ 4:30  ರಿಂದ ಬೆಳಿಗ್ಗೆ 9:30ರ ವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು ಎಂದು ಸಂಚಾರ ಪೋಲಿಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.