ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ಭಕ್ತರಿಗೆ ದರ್ಶನ ಶೀಘ್ರ ದೊರೆಯುವಂತೆ ಮಾಡುವ ಉದ್ದೇಶದಿಂದ ವಿಐಪಿ (ಅತಿ ಗಣ್ಯ ವ್ಯಕ್ತಿ) ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಏಪ್ರಿಲ್ 1ರಿಂದ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದು ಟಿಟಿಡಿ ಟ್ರಸ್ಟ್ ಸದಸ್ಯ ಎಸ್. ನರೇಶ್ ಕುಮಾರ್ ತಿಳಿಸಿದ್ದಾರೆ.
ಬೆಳಿಗ್ಗೆ 8.30ರಿಂದ 10ರ ವರೆಗೆ ವಿಐಪಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದರಿಂದ ಶೀಘ್ರ ದರ್ಶನದ ಹಾಗೂ ಸರ್ವ ದರ್ಶನದ ಸರದಿಯಲ್ಲಿ ತೆರಳುವ ಭಕ್ತರಿಗೆ ಬಹಳಷ್ಟು ಸಮಯ ವ್ಯಯವಾಗುತ್ತಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಟಿಟಿಡಿ ಮಂಡಳಿ ಸಭೆಯಲ್ಲಿ ವಿಐಪಿ ದರ್ಶನದ ಸಮಯವನ್ನು ಬದಲಾವಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 1ರಿಂದ ಬೆಳಿಗ್ಗೆ 5.30ರಿಂದ 7.30ರವರೆಗೆ ವಿಐಪಿ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ವಾರಾಂತ್ಯ ಹಾಗೂ ವಿಶೇಷ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಈ ಸಮಯದಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.