ಬೆಂಗಳೂರು: ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಜೂನ್ 18ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ನಡೆಯಲಿದ್ದು, ಅರಮನೆ ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ದಟ್ಟಣೆಯಾಗುವ ಸಾಧ್ಯತೆಯಿದೆ.
ಕಾರ್ಯಕ್ರಮಕ್ಕೆ 10 ಸಾವಿರ ಮಂದಿ ಸೇರುವ ನಿರೀಕ್ಷೆಯಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ಕೋರಿದ್ದಾರೆ.
ವಾಹನ ನಿಲುಗಡೆ ನಿಷೇಧ ಮಾಡಿರುವ ರಸ್ತೆಗಳು: ಪ್ಯಾಲೇಸ್ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜ್ ರಸ್ತೆ, ಎಂ.ವಿ.ಜಯರಾಮ ರಸ್ತೆ, ಸಿ.ವಿ.ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ವೃತ್ತದಿಂದ ಯಶವಂತಪುರ ಬಸ್ ನಿಲ್ದಾಣದ ವರೆಗೆ, ವಸಂತನಗರ ರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.