ADVERTISEMENT

ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಚನ್ನಮ್ಮ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 15:42 IST
Last Updated 6 ಜೂನ್ 2024, 15:42 IST
ಚನ್ನಮ್ಮ ಪಟಾಲಪ್ಪ
ಚನ್ನಮ್ಮ ಪಟಾಲಪ್ಪ   

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್ನಮ್ಮ ಪಟಾಲಪ್ಪ ಆಯ್ಕೆಯಾಗಿದ್ದಾರೆ.

ಅಂಬಿಕಾ ರಾಜೇಂದ್ರಕುಮಾರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ (ಸಾಮಾನ್ಯ ಮಹಿಳೆ) ಬುಧವಾರ ಚುನಾವಣೆ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚನ್ನಮ್ಮ ಹಾಗೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಹೇಮಲತಾ ನಾಮಪತ್ರ ಸಲ್ಲಿಸಿದ್ದರು. 27 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಚನ್ನಮ್ಮ 16 ಮತ್ತು ಹೇಮಲತಾ 11 ಮತಗಳನ್ನು ಪಡೆದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್‌.ಜಿ. ನರಸಿಂಹಮೂರ್ತಿ, ಅಂಬಿಕಾ ರಾಜೇಂದ್ರಕುಮಾರ್‌ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.