ADVERTISEMENT

ಮೆಟ್ರೊ ಪಿಲ್ಲರ್‌ ಅವಘಡದಲ್ಲಿ ತಾಯಿ–ಮಗು ಸಾವು ಪ್ರಕರಣ: ಚಾರ್ಜ್‌ಶೀಟ್ ಸಿದ್ಧ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 23:25 IST
Last Updated 23 ಜೂನ್ 2023, 23:25 IST
ನಮ್ಮ ಮೆಟ್ರೊ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ ಉರುಳಿರುವ ಚಿತ್ರ
ನಮ್ಮ ಮೆಟ್ರೊ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ ಉರುಳಿರುವ ಚಿತ್ರ   

ಬೆಂಗಳೂರು: ಹೆಣ್ಣೂರು ಕ್ರಾಸ್ ಬಳಿ ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿ ಬಿದ್ದು ತಾಯಿ–ಮಗು ಮೃತಪಟ್ಟಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಗೋವಿಂದಪುರ ಠಾಣೆ ಪೊಲೀಸರು, ದೋಷಾರೋಪ ಪಟ್ಟಿ ಸಿದ್ಧಪಡಿಸಿದ್ದಾರೆ.

ನಿರ್ಮಾಣ ಹಂತದ ಪಿಲ್ಲರ್‌ನ ಕಬ್ಬಿಣದ ಚೌಕಟ್ಟು ಜ. 10ರಂದು ಉರುಳಿ ಬಿದ್ದಿತ್ತು. ಬೈಕ್‌ನಲ್ಲಿ ಹೊರಟಿದ್ದ ತೇಜಸ್ವಿನಿ‌ ಸುಲಾಖೆ (28) ಹಾಗೂ ಅವರ ಎರಡೂವರೆ ವರ್ಷದ ‌ಮಗ ವಿಹಾನ್ ಮೃತಪಟ್ಟಿದ್ದರು.

‘ಅವಘಡಕ್ಕೆ ಕಾರಣವಾದ ಆರೋಪದಡಿ ಬಿಎಂಆರ್‌ಸಿಎಲ್ ಹಾಗೂ ನಾಗಾರ್ಜುನ್ ಕನ್‌ಸ್ಟ್ರಕ್ಷನ್ ಕಂಪನಿಯ (ಎನ್‌ಸಿಸಿ) 11 ಅಧಿಕಾರಿಗಳ ವಿರುದ್ಧ ಎಫ್‌ಐಅರ್ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದ ತನಿಖೆ ಪೂರ್ಣಗೊಂಡಿದೆ. ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದ್ದು, ಕಾನೂನು ತಜ್ಞರ ಪರಿಶೀಲನೆಗೆ ನೀಡಲಾಗಿದೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

‘ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಹಾಗೂ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿರುವುದಕ್ಕೆ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ತಜ್ಞರ ವರದಿ, ವಿಧಿ ವಿಜ್ಞಾನ ಪ್ರಯೋಗಾಯ ವರದಿಗಳೂ 1,100 ‍ಪುಟಗಳ ಆರೋಪ ಪಟ್ಟಿಯಲ್ಲಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.