ADVERTISEMENT

ಶ್ರೀರಾಮುಲು ಹೆಸರಿನಲ್ಲಿ ವಂಚನೆ; ‘ಮಧ್ಯವರ್ತಿ’ ಬಂಧನ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 16:48 IST
Last Updated 31 ಆಗಸ್ಟ್ 2021, 16:48 IST
ಶ್ರೀರಾಮುಲು
ಶ್ರೀರಾಮುಲು    

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹ 5 ಲಕ್ಷ ಪಡೆದು ವಂಚಿಸಿದ ಆರೋಪದಡಿ ಧರ್ಮತೇಜ್ ಎಂಬಾತನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ಧರ್ಮತೇಜ್, ರಿಯಲ್ ಎಸ್ಟೇಟ್ ಮಧ್ಯವರ್ತಿ. ಸಾರಿಗೆ ಸಚಿವ ಶ್ರೀರಾಮುಲು ಅವರ ಸಂಬಂಧಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ. ಪ್ರದೀಪ್ ಎಂಬುವರು ನೀಡಿದ್ದ ದೂರು ಆಧರಿಸಿ ಆತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮೂರು ದಿನ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಶ್ರೀರಾಮಲು ಅವರ ಆಪ್ತ ಸಹಾಯಕನೆಂದೂ ಹೇಳಿಕೊಳ್ಳುತ್ತಿದ್ದ ಧರ್ಮತೇಜ್, ದೂರುದಾರ ಪ್ರದೀಪ್ ಅವರನ್ನು ಕಳೆದ ವರ್ಷ ಪರಿಚಯ ಮಾಡಿಕೊಂಡಿದ್ದ. ‘ವಿಧಾನಸೌಧದಲ್ಲಿ ಸರ್ಕಾರಿ ಕೆಲಸ ಖಾಲಿ ಇದೆ. ಹಣ ಕೊಟ್ಟರೆ ನಿನಗೆ ಕೊಡಿಸುತ್ತೇನೆ’ ಎಂಬುದಾಗಿ ಧರ್ಮತೇಜ್ ಹೇಳಿದ್ದ. ಅದನ್ನು ನಂಬಿದ್ದ ದೂರುದಾರ, ಆರೋಪಿಗೆ ₹5 ಲಕ್ಷ ಕೊಟ್ಟಿದ್ದರು. ಈ ಸಂಗತಿ ದೂರಿನಲ್ಲಿತ್ತು.’

ADVERTISEMENT

‘ಹಣ ಪಡೆದು ಹಲವು ತಿಂಗಳಾದರೂ ಆರೋಪಿ ಕೆಲಸ ಕೊಡಿಸಿರಲಿಲ್ಲ. ಬೇಸತ್ತ ದೂರುದಾರ, ಹಣ ವಾಪಸು ನೀಡುವಂತೆ ಒತ್ತಾಯಿಸಿದ್ದರು. ಅಷ್ಟಕ್ಕೆ ಕೋಪಗೊಂಡಿದ್ದ ಆರೋಪಿ, ಹಣ ನೀಡುವುದಿಲ್ಲವೆಂದು ಬೆದರಿಕೆ ಹಾಕಿದ್ದ’ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.