ADVERTISEMENT

ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 6:00 IST
Last Updated 23 ಫೆಬ್ರುವರಿ 2019, 6:00 IST
ಕೋ. ಚೆನ್ನಬಸಪ್ಪ
ಕೋ. ಚೆನ್ನಬಸಪ್ಪ    

ಬೆಂಗಳೂರು: ನಿವೃತ್ತ ಜಿಲ್ಲಾ ನ್ಯಾಯಾಧೀಶ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಹಿತಿ ಕೋ.ಚನ್ನಬಸಪ್ಪ (97) ಶನಿವಾರ ನಗರದ ಅವರ ನಿವಾಸದಲ್ಲಿ ಬೆಳಗ್ಗೆ 7.30ರಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಖಾನಾ ಹೊಸಹಳ್ಳಿ ಹೋಬಳಿಯ ಆಲೂರು ಗ್ರಾಮದಲ್ಲಿ 1922ರ ಮಾರ್ಚ್ 1 ರಂದು ಜನಿಸಿದ್ದರು.

ರಾಜಾಜಿನಗರದ ಮೊದಲನೆಯ ಬ್ಲಾಕ್ ನಿವಾಸದಲ್ಲಿ ಪಾರ್ಥಿವ ಶರೀರ ಇರಿಸಲಾಗಿದೆ.

ADVERTISEMENT

‘ಅಂತ್ಯಕ್ರಿಯೆ ನಾಳೆ (ಫೆ.24) ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ’ ಎಂದು ಅವರ ಪುತ್ರ ಡಾ.ಕೆ.ಸಿ.ಗುರುದೇವ ಪ್ರಜಾವಾಣಿಗೆ ತಿಳಿಸಿದ್ದಾರೆ.ಬಳ್ಳಾರಿ, ಆಂಧ್ರಪ್ರದೇಶದ ಅನಂತಪುರದಲ್ಲಿ ಪದವಿವರೆಗಿನ ಶಿಕ್ಷಣ ಪಡೆದಿದ್ದ ಅವರು ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಕಾನೂನು ಪದವಿ ಪೂರೈಸಿದ್ದರು.

ಜಿಲ್ಲಾ ನ್ಯಾಯಾಧೀಶರಾಗಿ, ವಿಜಯಪುರ, ಮಂಗಳೂರು, ಹಾಸನ, ಶಿವಮೊಗ್ಗ ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು.ರಾಮಕೃಷ್ಣ ಆಶ್ರಮದ ನಿಕಟ ಸಂಪರ್ಕ ಹೊಂದಿದ್ದ ಅವರು ಪುದುಚೇರಿಯ ಅರವಿಂದ ಆಶ್ರಮದ ಅಧ್ಯಕ್ಷರೂ ಆಗಿದ್ದರು.

ಕುವೆಂಪು ಅವರ ಅಪ್ತವರ್ಗದಲ್ಲಿ ಗುರುತಿಸಿಕೊಂಡಿದ್ದ ಕೋಚೆ ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ ಸೇರಿದಂತೆ ಹಲವಾರು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.ವಿಜಯಪುರದಲ್ಲಿ 2015ರಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಮತ್ತು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗೂ ಭಾಜನರಾಗಿದ್ದರು.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.