ಬೆಂಗಳೂರು: ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮೇ 5ರಂದು 30 ನಿಮಿಷ ತಡವಾಗಿ ಹೊರಡಲಿದೆ.
ವರದಪುರದಲ್ಲಿ ಹೆಚ್ಚುವರಿ ಲೂಪ್‌ಲೈನ್ ಕಾರ್ಯಾರಂಭಕ್ಕಾಗಿ ಈ ಮಾರ್ಗವನ್ನು ಅಂದು ಅರ್ಧ ಗಂಟೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಪ್ರತಿದಿನ ಬೆಳಿಗ್ಗೆ 5.50ಕ್ಕೆ ಹೊರಡುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.