ADVERTISEMENT

ಚೇತನ್‌ ಅಹಿಂಸಾ: ತಡೆ ಆದೇಶ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 22:48 IST
Last Updated 2 ಜೂನ್ 2023, 22:48 IST
ಚೇತನ್‌ ಅಹಿಂಸಾ
ಚೇತನ್‌ ಅಹಿಂಸಾ   

ಬೆಂಗಳೂರು: ನಟ ಚೇತನ್‌ ಎ. ಕುಮಾರ್ ಅಲಿಯಾಸ್ ಚೇತನ್‌ ಅಹಿಂಸಾ ಅವರ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್‌ ಅನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್‌ ಇದೇ 20ರವರೆಗೆ ವಿಸ್ತರಿಸಿದೆ.

ಈ ಸಂಬಂಧ ಚೇತನ್‌ ಎ. ಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದೆ. 

ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೇತನ್‌ ಎ.ಕುಮಾರ್ ವಿರುದ್ಧ ಕ್ರಮ ಕೈಗೊಂಡಿದ್ದ ಕೇಂದ್ರ ಸರ್ಕಾರ, ಅವರ ಒಸಿಐ ಕಾರ್ಡ್‌ ಅನ್ನು 2023ರ ಮಾರ್ಚ್‌ 28ರಂದು ರದ್ದುಪಡಿಸಿತ್ತು. ಇದರಿಂದ ಗಡಿಪಾರು ಭೀತಿಗೆ ಒಳಗಾಗಿದ್ದ ಚೇತನ್‌ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.