ADVERTISEMENT

ಬೆಂಗಳೂರು: ವಾರದಲ್ಲಿ 2 ದಿನ BBMP ಮುಖ್ಯ ಆಯುಕ್ತರ ನಡೆ- ವಲಯದ ಕಡೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 0:53 IST
Last Updated 9 ಜುಲೈ 2025, 0:53 IST
ಎಂ. ಮಹೇಶ್ವರ ರಾವ್‌
ಎಂ. ಮಹೇಶ್ವರ ರಾವ್‌   

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರು ವಾರದಲ್ಲಿ ಎರಡು ದಿನ ‘ಮುಖ್ಯ ಆಯುಕ್ತರ ನಡೆ- ವಲಯದ ಕಡೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿ,  ನಾಗರಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗಲು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಲು ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಆಯಾ ವಲಯಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಬೆಳಿಗ್ಗೆ 7ರಿಂದ 10ರವರೆಗೆ ವಿವಿಧ ಸ್ಥಳಗಳ ಭೆಟಿ ನೀಡಿ ಪರೀಶೀಲನೆ ನಡೆಸಲಿದ್ದಾರೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಂದ ಕುಂದುಕೊರತೆ/ ಅಹವಾಲುಗಳನ್ನು ಪರಿಶೀಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.