ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯ ಎಂಜಿನಿಯರ್ ವೃಂದದ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಬಿ.ಜಿ. ರಾಮಚಂದ್ರಯ್ಯ ಅವರನ್ನು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಡಳಿತಾಧಿಕಾರಿ (ಕಾಡಾ) ಹುದ್ದೆಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಡಳಿತಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಬಿ. ಕುಲಕರ್ಣಿ ಅವರನ್ನು ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.
ಕೃಷ್ಣಮೂರ್ತಿಯವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ, ಸ್ಥಳ ನಿರೀಕ್ಷೆಯಲ್ಲಿದ್ದ ಆರ್. ಪ್ರಸಾದ್ ಅವರನ್ನು ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.