ADVERTISEMENT

ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 20 ಮೇ 2022, 9:29 IST
Last Updated 20 ಮೇ 2022, 9:29 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಎಂಟು ವಾರಗಳಲ್ಲಿ ವಾರ್ಡ್‌ ಪುನರ್‌ ವಿಂಗಡಣೆ ಮಾಡಿ, ಒಬಿಸಿ ಮಿಸಲಾತಿಯನ್ನೂ ನಿಗದಿಪಡಿಸಿ ಬಿಬಿಎಂಪಿಗೆ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ತೀರ್ಪು ನಮ್ಮ ವಾದಕ್ಕೆ ಸಿಕ್ಕಿರುವ ಮನ್ನಣೆಯಾಗಿದೆ. ಚುನಾವಣೆ ನಡೆಸಲು ತಕ್ಷಣವೇ ಅಗತ್ಯ ಪ್ರಕ್ರಿಯೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಬಿಬಿಎಂಪಿ ವಾರ್ಡ್‌ಗಳ ಪುನರ್‌ವಿಂಗಡಣೆ ಕಾರ್ಯ ಪೂರ್ಣಗೊಳ್ಳುತ್ತಾ ಬಂದಿದೆ. ಪುನರ್‌ವಿಂಗಡಣೆ ಪೂರ್ಣಗೊಂಡ ತಕ್ಷಣ ಅಧಿಸೂಚನೆ ಹೊರಡಿಸುತ್ತೇವೆ. ಒಬಿಸಿ ಮೀಸಲಾತಿ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ನ್ಯಾ.ಭಕ್ತವತ್ಸಲಂ ಸಮಿತಿಯೂ ಎಂಟು ವಾರಗಳೊಳಗೆ ವರದಿ ನೀಡಲಿದೆ. ಚುನಾವಣೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ. ಸುಪ್ರೀಂಕೋರ್ಟ್‌ ಹೇಳಿದ ಮೇಲೆ ಅದನ್ನು ಪಾಲನೆ ಮಾಡುತ್ತೇವೆ. ಮತ್ತೆ ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತುವ ಪ್ರಶ್ನೆಯೇ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.