ಬೆಂಗಳೂರು: ಸಂಯುಕ್ತ ಕರ್ನಾಟಕದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಳ, ಸಜ್ಜನ ವ್ಯಕ್ತಿ ಯಾಗಿದ್ದ ಅವರು ತಮ್ಮ ನಿಷ್ಪಕ್ಷಪಾತ ಹಾಗೂ ವಸ್ತುನಿಷ್ಠ ವರದಿಗಾರಿಕೆಯಿಂದ ಹೆಸರುವಾಸಿಯಾಗಿದ್ದರು. ಇತ್ತೀಚೆಗೆ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನನ್ನ ಸಂದರ್ಶನ ಮಾಡಿದ್ದು ನನ್ನ ನೆನಪಿನಂಗಳದಲ್ಲಿ ಇನ್ನೂ ಹಚ್ಚ ಹಸಿರಾಗಿದೆ. ಯಡವಟ್ಟಿ ಅವರ ನಿಧನದಿಂದ ಮಾಧ್ಯಮ ಕ್ಷೇತ್ರದ ಅತ್ಯುತ್ತಮ ಪತ್ರಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.
ಭಗವಂತ ಮೃತರ ಆತ್ಮಕ್ಕೆ ಶಾಂತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.