ADVERTISEMENT

ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಚಿಕ್ಕಜಾಲ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 19:51 IST
Last Updated 27 ನವೆಂಬರ್ 2025, 19:51 IST
ಬ್ಯಾಟರಾಯನಪುರ ಕ್ಷೇತ್ರದ ಚಿಕ್ಕಜಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ʼನಮ್ಮ ಮೆಡಿಕಲ್ಸ್‌ʼ ಔಷಧಿ ಮಳಿಗೆಯನ್ನು ಸಚಿವ ಕೃಷ್ಣಬೈರೇಗೌಡ ಜನಾರ್ಪಣೆಗೊಳಿಸಿದರು.
ಬ್ಯಾಟರಾಯನಪುರ ಕ್ಷೇತ್ರದ ಚಿಕ್ಕಜಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ʼನಮ್ಮ ಮೆಡಿಕಲ್ಸ್‌ʼ ಔಷಧಿ ಮಳಿಗೆಯನ್ನು ಸಚಿವ ಕೃಷ್ಣಬೈರೇಗೌಡ ಜನಾರ್ಪಣೆಗೊಳಿಸಿದರು.   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಚಿಕ್ಕಜಾಲ ಗ್ರಾಮದಲ್ಲಿ ಕಾಂಕ್ರೀಟ್‌ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ಇದೇ ವೇಳೆ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಿಸಿರುವ ʼನಮ್ಮ ಮೆಡಿಕಲ್ಸ್‌ʼ ಔಷಧಿ ಮಳಿಗೆಯನ್ನು ಜನಾಪರ್ಣೆಗೊಳಿಸಿದರು.

ನಂತರ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ವಿಮಾನನಿಲ್ದಾಣ ಮುಖ್ಯರಸ್ತೆಯಿಂದ ಹಾಲಿನ ಡೈರಿಯ ಮೂಲಕ ಚಿಕ್ಕಜಾಲ ಗ್ರಾಮದೊಳಗೆ ಹಾಗೂ ಉತ್ತನಹಳ್ಳಿಯ ಅಕ್ಕಯ್ಯಮ್ಮನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯನ್ನು ಈ ಹಿಂದೆ ಅಭಿವೃದ್ಧಿಪಡಿಸಲಾಗಿತ್ತು. ಹಾಳಾಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಇದಕ್ಕಾಗಿ ₹2.50 ಕೋಟಿ ವೆಚ್ಛದಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದರು.

ADVERTISEMENT

ಚಿಕ್ಕಜಾಲ ಗ್ರಾಮಪಂಚಾಯಿತಿ ಅಧ್ಯಕ್ಷ ರವಿಕುಮಾರ್‌, ಉಪಾಧ್ಯಕ್ಷೆ ಗೌರಿ ಗೋಪಾಲ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಉದಯಶಂಕರ್‌, ಕಾಂಗ್ರೆಸ್‌ ಮುಖಂಡರಾದ ಕೆ.ಅಶೋಕನ್‌, ಎನ್‌.ಕೆ.ಮಹೇಶ್‌ಕುಮಾರ್‌, ಎಸ್‌.ಕೆ.ಕಿರಣ್‌ಕುಮಾರ್‌, ಜಯಕುಮಾರ್‌, ಕೆಡಿಪಿ ಸದಸ್ಯ ಬಿ.ಕೆ.ನಾರಾಯಣಸ್ವಾಮಿ, ಪಂಚಾಯಿತಿ ಸದಸ್ಯರಾದ ಚಂದು, ಪ್ರೇಮ್‌ಕುಮಾರ್‌, ಬಿ.ಆರ್‌.ಪ್ರವೀಣ್‌, ದೊಡ್ಡಜಾಲ ಗ್ರಾಮಪಂಚಾಯಿತಿ ಅಧ್ಯಕ್ಷ ಆರ್‌.ಬೈರೇಗೌಡ, ಮಾಜಿ ಅಧ್ಯಕ್ಷರಾದ ಚಂದುಕುಮಾರ್‌, ಬಿ.ಎಂ.ನಾಗೇಶ್‌, ಎಚ್‌.ಪಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.