ADVERTISEMENT

ಮಗು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 15:53 IST
Last Updated 2 ಆಗಸ್ಟ್ 2025, 15:53 IST
ಚಂದ್ರಿಕಾ
ಚಂದ್ರಿಕಾ   

ಬೆಂಗಳೂರು: ತಿಗಳರಪಾಳ್ಯದ ಬಾಲಾಜಿನಗರದಲ್ಲಿ ಮಗು ವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ವರ್ಷ ಎಂಟು ತಿಂಗಳ ಮಗುವನ್ನು ಚಂದ್ರಿಕಾ(24) ಅವರು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಚಂದ್ರಿಕಾ ಅವರ ಪತಿ ಲೋಕೇಶ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲು ಮಾಡಿ
ಕೊಳ್ಳಲಾಗಿದೆ ಎಂದು ಪೊಲೀಸರು
ಹೇಳಿದರು.

ADVERTISEMENT

‘ಹಣಕಾಸು ಮತ್ತು ಕೌಟುಂಬಿಕ ಸಮಸ್ಯೆಯಿಂದ ಚಂದ್ರಿಕಾ ಅವರು ಮನನೊಂದು ಮಗುವಿಗೆ ವಿಷ ಕುಡಿಸಿ ತಾನೂ ಸಹ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮಾಹಿತಿ ತಿಳಿದ ಕುಟುಂಬಸ್ಥರು ತಾಯಿ ಹಾಗೂ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಮಗು ಆಸ್ಪತ್ರೆ ಯಲ್ಲಿ ಮೃತಪಟ್ಟಿದೆ. ತಾಯಿಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.

‘ಲೋಕೇಶ್ ಅವರು ತಿಗಳರ ಪಾಳ್ಯದಲ್ಲಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಚಂದ್ರಿಕಾ ಅವರು ಗೃಹಿಣಿ. ದಂಪತಿಗೆ ಆರು ವರ್ಷದ ಪುತ್ರ ಸಹ ಇದ್ದಾನೆ. ಅವನು ಕೊರಟಗೆರೆಯ ಚಿಕ್ಕನಹಳ್ಳಿಯಲ್ಲಿರುವ ಅಜ್ಜಿಯ ಮನೆಯಲ್ಲಿ ವಾಸ ಮಾಡುತ್ತಿದ್ದ. ದಂಪತಿ ಮಧ್ಯೆ ಹಣಕಾಸು ವಿಚಾರಕ್ಕೆ ನಿತ್ಯ ಗಲಾಟೆ ನಡೆಯುತ್ತಿತ್ತು. ಜುಲೈ 29ರಂದು ಲೋಕೇಶ್ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ’ ಎಂದು ಪೊಲೀಸರು
ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.