ಬೆಂಗಳೂರು: ಕ್ಯಾಬ್‌ಗಳಲ್ಲಿನ ‘ಚೈಲ್ಡ್ ಸೇಫ್ಟಿ ಲಾಕ್’ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ದಿಸೆಯಲ್ಲಿನ ಕರಡು ತಿದ್ದುಪಡಿಯನ್ನು ಕಾನೂನು ಇಲಾಖೆ ಅನುಮೋದನೆಗೆ ಕಳುಹಿಸಿಕೊಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ (ಬಿಎಸ್‌ಒಜಿ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಚೈಲ್ಡ್ ಸೇಫ್ಟಿ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ಸಂಬಂಧ ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್‌ಪೋರ್ಟೇಷನ್ ಟೆಕ್ನಾಲಜಿ ಅಗ್ರಿಗೇಟರ್ ರೂಲ್ಸ್ - 2016ಕ್ಕೆ ತಿದ್ದುಪಡಿ ತರಲಾಗಿದೆ’ ಎಂದರು.
‘ಈ ಕುರಿತ ಕರಡು ತಿದ್ದುಪಡಿಯನ್ನು ಸೆ.18ರಂದು ಕಾನೂನು ಇಲಾಖೆಗೆ ಕಳುಹಿಸಿಕೊಡಲಾಗಿದೆ. ಅನುಮೋದನೆ ದೊರೆತ ಬಳಿಕ ಸಾರ್ವಜನಿಕ ಪ್ರಕಟಣೆ ನೀಡಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು’ ಎಂದು ತಿಳಿಸಿದರು.
ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.